Friday, December 8, 2023

Latest Posts

ಪ್ರತಿದಿನ ಪಂಪ್‌ ಸೆಂಟ್‌ಗಳಿಗೆ ಏಳು ತಾಸು ವಿದ್ಯುತ್‌ : ಸಿಎಂ ಸಿದ್ದರಾಮಯ್ಯ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ರೈತರ ಪಂಪ್​ಸೆಟ್​ಗಳಿಗೆ 7 ತಾಸು ವಿದ್ಯುತ್ ಪೂರೈಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು , ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ ಎಂದರು.

ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ ಎಂದರು.

ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯದಾದ್ಯಂತ ಪಂಪ್‌ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ.ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ ಎಂದರು. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!