ಕಾರಿನೊಳಗೆ ಕುಟುಂಬದ ಏಳು ಮಂದಿ ಮೃತದೇಹ ಪತ್ತೆ: ಸಾಲಬಾಧೆಗೆ ನೊಂದು ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಾಲ ಬಾಧೆಯಿಂದ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಯಾರ್ಣದ ಪಂಚಕುಲದಲ್ಲಿ ನಡೆದಿದೆ.

ಡೆಹ್ರಾಡೂನ್​ನ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಜೀವ ಬಿಟ್ಟಿದ್ದಾರೆ. ಸೆಕ್ಟರ್ 27 ರಲ್ಲಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಇರುವುದು ಪತ್ತೆಯಾಗಿದೆ. ಕುಟುಂಬವು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ.

ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತಮ್ಮ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.

ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವು ಡೆಹ್ರಾಡೂನ್‌ಗೆ ಹಿಂತಿರುಗುತ್ತಿದ್ದಾಗ ಭಾನುವಾರ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಕುಟುಂಬವನ್ನು ಮೊದಲು ಸ್ಥಳೀಯರು ನೋಡಿದ್ದಾರೆ. ಕಾರಿನೊಳಗೆ ಅವರು ಕಷ್ಟಪಡುತ್ತಿರುವುದನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಒಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕುಟುಂಬ ಸದಸ್ಯರನ್ನು ರಕ್ಷಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!