Sunday, December 3, 2023

Latest Posts

ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣಾದ ಘಟನೆ ಗುಜರಾತ್ ಸೂರತ್ ನಲ್ಲಿ ಶನಿವಾರ ನಡೆದಿದೆ.

ಸ್ಥಳದಿಂದ ಪೊಲೀಸರು ಡೆತ್ ನೋಟ್ ಸಹ ವಶಪಡಿಸಿಕೊಂಡಿದ್ದಾರೆ.ಮೇಲ್ನೋಟಕ್ಕೆ, ಕುಟುಂಬವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಹೇಳಲಾಗಿದೆ. ಘಟನೆಯ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಸೂರತ್ ಡಿಸಿಪಿ ರಾಕೇಶ್ ಬರೋಟ್, ಒಂದೇ ಕುಟುಂಬದ ಏಳು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಆತ್ಮಹತ್ಯೆ ಪತ್ರವನ್ನು ಬರೆದಿದ್ದಾರೆ ಮತ್ತು ಕೊಲೆಗೆ ನಿಖರ ಕಾರಣ ಹುಡುಕುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!