ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತ್ತೆ ಏಳು ತಾಲೂಕುಗಳನ್ನುಬರ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೀದರ್ ಜಿಲ್ಲೆಯ ಔರಾದ್, ಬೀದರ್, ಚಿಟಗುಪ್ಪಾ, ಹುಮ್ನಾಬಾದ್, ಕಮಲನಗರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು, ವಿಜಯಪುರ ಜಿಲ್ಲೆಯ ತಿಕೋಟಾವನ್ನು ಸೇರ್ಪಡೆಗೊಳಿಸಿ ಕಂದಾಯ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಮುಂದಿನ ಎರಡು ವಾರಗಳವರೆಗೆ ರಾಜ್ಯದಲ್ಲಿನ ಬರ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿ ನವೆಂಬರ್ 15 ರೊಳಗೆ ವರದಿ ಸಲ್ಲಿಸುವಂತೆ ಸಿಎಂ ಎಲ್ಲಾ ಸಚಿವರಿಗೆ ಸೂಚಿಸಿದ್ದಾರೆ.