ಹಿಮಾಚಲ ಪ್ರದೇಶದಲ್ಲಿ ಭೀಕರ ಅಪಘಾತ: ಏಳು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲಪ್ರದೇಶದ ಕುಲ್ಲುವಿನಲ್ಲಿ ಅಪಘಾತ ಸಂಭವಿಸಿದ್ದು ಏಳು ಮಂದಿ ಮೃತಪಟ್ಟಿದ್ದಾರೆ.
ಬಂಜಾರ್‌ನಲ್ಲಿ ಟೆಂಪೋ ಟ್ರಾವೆಲರ್ ಕಂದಕಕ್ಕೆ ಬಿದ್ದಿದ್ದು, ಏಳು ಮಂದಿ ಮೃತಪಟ್ಟು, ೧೦ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಲ್ಲು ಆಸ್ಪತ್ರೆಗೆ ಗಾಯಗೊಂಡವರನ್ನು ದಾಖಲಿಸಿದದ್ದು, ಸ್ಥಳೀಯರು ಮತ್ತು ಪೊಲೀಸ್ ತಂಡ ಜಂಟಿಯಾಗಿ ರಕ್ಷಣಾ ಕಾರ್ಯ ನಡೆಸಿದೆ.
ಪ್ರವಾಸಿಗರ ಟೆಂಪೋ ಟ್ರಾವೆಲರ್ ಅಪಘಾತಕ್ಕೀಡಾಗಿದ್ದು, ಸ್ಥಳಕ್ಕೆ ತಕ್ಷಣ ಪೊಲೀಸರು ತಲುಪಿ ರಕ್ಷಣೆಗೆ ಮುಂದಾಗಿದ್ದಾರೆ. ವಾರಣಾಸಿಯ ಐಐಟಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇವರಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!