ಭೀಕರ ಮಳೆ ಗಾಳಿ: ಸಿಡಿಲು ಬಡಿದು ಇಬ್ಬರು ಮಕ್ಕಳು ಸಹಿತ ಏಳು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶ ರಾಜ್ಯದಲ್ಲಿ ಸಿಡಿಲು ಬಡಿದು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಬುಡೌನ್, ಇಲಾಹ್ ಮತ್ತು ರಾಯ್ ಬರೇಲಿ ಜಿಲ್ಲೆಗಳಲ್ಲಿ ಸಿಡಿಲಿನ ಘಟನೆಗಳು ವರದಿಯಾಗಿವೆ.

ಗುರುವಾರ ವಿವಿಧ ಪ್ರದೇಶಗಳಲ್ಲಿ ಸಿಡಿಲು ಬಡಿದು ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಬ್ಲು (30) ಮತ್ತು ವರ್ಜಿತ್ ಯಾದವ್ (32) ಎಂಬ ಇಬ್ಬರು ರೈತರು ಉಷೈತ್ ಬಜಾರ್‌ನಿಂದ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಸಿಡಿಲು ಬಡಿದು  ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೇ ಪ್ರದೇಶದಲ್ಲಿ ಅಂಶಿತಾ(11) ಶಾಲೆಯಿಂದ ಮನೆಗೆ ಬರುತ್ತಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾಳೆ. ಮೃತರ ಕುಟುಂಬಗಳಿಗೆ ತಲಾ ರೂ.4 ಲಕ್ಷ ಪರಿಹಾರ ಘೋಷಿಸಲಾಗಿದೆ.

ರಾಯ್ ಬರೇಲಿಯ ದಿಹ್, ಭಡೋಕರ್ ಮತ್ತು ಮಿಲ್ ಏರಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಹ್ ಪೊಲೀಸ್ ಠಾಣಾ ವ್ಯಾಪ್ತಿಯ ಗೆಂದಾಲಾಲ್ ಗ್ರಾಮದ ಬಳಿಯ ಜಮೀನಿನಲ್ಲಿ ದನ ಮೇಯಿಸುತ್ತಿದ್ದ ಮೋಹಿತ್ ಪಾಲ್ (14) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಿಲ್ ಏರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಾ ಪ್ರಸಾದ್ (38) ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಇಟಾಹ್‌ನ ಖಂಜರಪುರ ಗ್ರಾಮದಲ್ಲಿ ದನ ಮೇಯಿಸುತ್ತಿದ್ದಾಗ ಸಿಡಿಲು ಬಡಿದು ಧರ್ಮೇಂದ್ರ (32) ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!