ಅಮೆರಿಕದ ಶಾಲೆಯೊಂದರಲ್ಲಿ ಗುಂಡಿನ ಮೊರೆತ: ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದೆ. 28ವರ್ಷದ ಯುವತಿಯೊಬ್ಬಳು ಮನಬಂದಂತೆ ಗುಂಡು ಹಾರಿಸಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಅಮೆರಿಕದ ಟೆನ್ನೆಸ್ಸಿಯ ನ್ಯಾಶ್‌ವಿಲ್ಲೆಯಲ್ಲಿರುವ ಕ್ರಿಶ್ಚಿಯನ್ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ವೇಳೆ ಶಾಲೆಯಲ್ಲಿ 200 ಮಕ್ಕಳಿದ್ದರು.

ಗುಂಡಿನ ಚಕಮಕಿ ನಡೆಯುತ್ತಿದ್ದಂತೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಯುವತಿ ಸಾವನ್ನಪ್ಪಿದ್ದು, ಗುರುತು ಇನ್ನೂ ಪೊಲೀಸರಿಂದ ದೃಢಪಟ್ಟಿಲ್ಲ. ಗುಂಡಿನ ದಾಳಿಯ ನಂತರ ಗಂಭೀರವಾಗಿ ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಮೃತದೇಹಗಳನ್ನು ಸ್ಥಳೀಯ ವಾಂಡರ್‌ಬಿಲ್ಟ್ ಮನ್ರೋ ಕ್ಯಾರೆಲ್ ಜೂನಿಯರ್ ಮಕ್ಕಳ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ನಂತರ ಶಾಲೆಯ ಇತರ ವಿದ್ಯಾರ್ಥಿಗಳನ್ನು ಪೊಲೀಸರು ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ದರು. ಅವರೆಲ್ಲರೂ 6ನೇ ತರಗತಿಯ ಕೆಳವರ್ಗದ ವಿದ್ಯಾರ್ಥಿಗಳಾಗಿದ್ದರಿಂದ ಭಯಗೊಂಡಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಎಲ್ಲ ಮಕ್ಕಳನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಲಾಗಿದೆ. ಈ ಗುಂಡಿನ ದಾಳಿಯ ಶಂಕಿತ ವ್ಯಕ್ತಿ ಯಾರು? ಈ ಶಾಲೆಗೂ ಆಕೆಗೂ ಏನು ಸಂಬಂಧ? ಗುಂಡಿನ ದಾಳಿಯ ಗುರಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!