ಹೊಸದಿಗಂತ ಮಡಿಕೇರಿ:
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಹಿತ ಪಕ್ಷದ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ.
ಕುಶಾನಗರದ ಆಸ್ಪತ್ರೆಯಲ್ಲಿದ್ದ ಮೃತ ವಿನಯ್ ಪಾರ್ಥೀವ ಶರೀರವನ್ನು ಪೊಲೀಸ್ ಸರ್ಪಗಾವಲಿನಲ್ಲಿ ಹುಟ್ಟೂರು ಗೋಣಿಮರೂರಿನತ್ತ ಕೊಂಡೊಯ್ಯೊಲು ಪೊಲೀಸರು ಮುಂದಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ತೀವ್ರಗೊಳಿಸಿದರು.
ಸಾವಿರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪೊಲೀಸರ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗತೊಡಗಿದರು. ಅತ್ತ ಕುಶಾಲನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಲು ಬಿಜೆಪಿ ಕಾರ್ಯಕರ್ತರು ಮುಂದಾಗುತ್ತಿರುವುದನ್ನರಿತ ಪೊಲೀಸರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ಯದುವೀರ್, ಮಾಜಿ ಸಂಸದ ಪ್ರತಾಪ್ ಸಿಂಹ, ಕೆ. ಜಿ ಬೋಪಯ್ಯ ಸೇರಿದಂತೆ ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.