ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಭಾಗದಲ್ಲಿ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ.
ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ದೇವಿಮನೆ ಘಟ್ಟ, ಶಿರಸಿ ತಾಲೂಕಿನ ರಾಗಿಹೊಸಳ್ಳಿ, ಕಸಗೆ, ಬಂಡಳದಲ್ಲಿ 3 ಸೆಕೆಂಡ್ ಭೂಮಿ ಕಂಪಿಸಿದೆ. ಭೂ ಕಂಪನದಿಂದ ಜನ ಭಯಭೀತರಾಗಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.