ಸ್ಕಾಟ್ಲೆಂಡ್‌ನಲ್ಲಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಸ್ಕಾಟ್ಲೆಂಡ್‌ನಲ್ಲಿ ನಡೆದಿದೆ. ಸ್ಕಾಟ್ಲೆಂಡ್‌ನ ಹೈಲ್ಯಾಂಡ್ಸ್‌ನ ಏವಿಮೋರ್ ರೈಲು ನಿಲ್ದಾಣದಲ್ಲಿ ಶುಕ್ರವಾರ ಎರಡು ರೈಲುಗಳು ಡಿಕ್ಕಿ ಹೊಡೆದು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬ್ರಿಟನ್‌ನ ರಾಜಧಾನಿ ಲಂಡನ್‌ನಿಂದ 965 ಕಿಮೀ ಉತ್ತರಕ್ಕಿರುವ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ 7:00 ಗಂಟೆಗೆ ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದವು ಎಂದು ಸ್ಥಳೀಯ ರೈಲ್ವೆ ಇಲಾಖೆ ಹೇಳಿದೆ.

ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ರಾಯಗ್ಮೋರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಇತರೆ ಪ್ರಯಾಣಿಕರಿಗೆ ಸ್ಥಳದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಸ್ಕಾಟ್ಲೆಂಡ್ ಪೊಲೀಸರು ತಿಳಿಸಿದ್ದಾರೆ. ಅಪಘಾತದ ಕಾರಣ ಏವಿಮೋರ್ ನಿಲ್ದಾಣದ ಮಾರ್ಗದಲ್ಲಿ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!