ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಕ್ಕಳು ಬೆಳಗ್ಗೆಯೇ ಶಾಲೆಗೆ ಹೋಗಲು, ಜನರು ಆಫೀಸಿಗೆ ಹೋಗಲು ಹೈರಾಣಾಗಿದ್ದಾರೆ. ಕೊರೆಯುವ ಚಳಿಯಲ್ಲಿ ಬೈಕ್‌ಗಳಲ್ಲಿ ತೆರಳುವವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.
ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಹೆಚ್ಚಿನ ಚಳಿ ಇರಲಿದೆ. ಇದರ ಜೊತೆ ಬೆಂಗಳೂರು ಸೇರಿದಂತೆ ಹಲವೆಡೆ ಮಧ್ಯಾಹ್ನದ ವೇಳೆ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

