March 3, 2026
Tuesday, March 3, 2026
spot_img

WEATHER | ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭಾರೀ ಚಳಿ, ಸಂಜೆ ಮೇಲೆ ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ​ ಇರುತ್ತದೆಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಳ್ಳಂಬೆಳಗ್ಗೆ ಚಳಿ ಹಾಗೂ ಮಂಜು ತುಂಬಿದ ವಾತಾವರಣವಿದೆ.

ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಒಣ ಹವೆಯಿರಲಿದೆ. ಬೆಂಗಳೂರು ನಗರದಲ್ಲಿ ಮಂಜು ಮುಸುಕಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ,ಚಿಕ್ಕಬಳ್ಳಾಪುರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !