ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಸಿಲು ನಾಡು ವಿಜಯಪುರ ಜಿಲ್ಲೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಚಳಿ ಅಧಿಕ ಪ್ರಮಾಣವಿದೆ. ದಾಖಲೆ ಪ್ರಮಾಣದಲ್ಲಿ ತಾಪಮಾನ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಅಧಿಕ ಶಾಲೆಗಳಲ್ಲಿ ಮಕ್ಕಳ ಶಾಲಾ ಆರಂಭದ ಸಮಯವನ್ನು ಮುಂದೂಡಲಾಗಿದೆ.
ಈ ಹಿನ್ನಲೆ ಜಿಲ್ಲಾಡಳಿತ ಡಿಸೆಂಬರ್ 31ರವರೆಗೆ ಎಲ್ಲಾ ಶಾಲೆಗಳ ಆರಂಭ ಸಮಯ ಬದಲಾವಣೆ ಮಾಡಿ ಆದೇಶ ಜಾರಿ ಮಾಡಿದೆ. ಆದರೆ ಈ ಆದೇಶ ಪಾಲನೆಯಾಗಿಲ್ಲ ಎಂದು ಪೋಷಕರು ಅಸಮಾಧಾನ ಹೊರ ಹಾಕಿದ್ಧಾರೆ.
ವಿಜಯಪುರ ಜಿಲ್ಲೆಯಲ್ಲಿ ಈ ಬಾರಿ ಕನಿಷ್ಠ ಪ್ರಮಾಣದ ಉಷ್ಣಾಂಶ ದಾಖಲಾಗಿದೆ. 20ವರ್ಷಗಳಲ್ಲಿ 3ನೇ ಕನಿಷ್ಠ ತಾಪಮಾನ ಹಾಗೂ 10 ವರ್ಷಗಳಲ್ಲಿ 4ನೇ ಬಾರಿ ಅತೀ ಕಡಿಮೆ ಉಷ್ಣಾಂಶ ದಾಖಲಾಗಿದೆ. ಚಳಿಯ ತೀವ್ರತೆ ಶಾಲಾ ಮಕ್ಕಳು, ವೃದ್ಧರು ಹಾಗೂ ವಿವಿಧ ಖಾಯಿಲೆಗಳಿಂದ ಬಳಲುತ್ತಿರುವವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಕಾರಣ ಎಲ್ಲಾ ಶಾಲೆಗಳ ಆರಂಭಿಕ ಸಮಯ ಬದಲಾವಣೆಯ ಕೂಗು ಕೇಳಿಬಂದಿತ್ತು.
ಜೊತೆಗೆ ರಾಜ್ಯ ವಿಪತ್ತು ನಿರ್ವಹಣಾ ಹಾಗೂ ಐಎಂಡಿ ಬೆಂಗಳೂರು ಪ್ರಕಾರ ರಾಜ್ಯದಲ್ಲಿ ಇನ್ನೂ ಶೀತಗಾಳಿ ಬೀಸುತ್ತಿರುವ ಹಿನ್ನಲೆ ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದ್ದರು. ಈ ಹಿನ್ನಲೆ ವಿಜಯಪುರ ಜಿಲ್ಲಾಧಿಕಾರಿ ಕೆ. ಆನಂದ ಎಲ್ಲಾ ಶಾಲೆಗಳ ಸಮಯ ಬದಲಾವಣೆ ಮಾಡಿ ಡಿಸೆಂಬರ್ 20ರಂದು ಆದೇಶ ಜಾರಿ ಹೊರಡಿಸಿದ್ದರು.
ರಾಜ್ಯದ ಈ ಜಿಲ್ಲೆಯಲ್ಲಿ ಸಿಕ್ಕಾಪಟ್ಟೆ ಚಳಿ, ಶಾಲಾ ಮಕ್ಕಳ ಟೈಮಿಂಗ್ಸ್ ಬದಲಾವಣೆ

