Sunday, February 5, 2023

Latest Posts

ಉತ್ತರ ಭಾರತದಲ್ಲಿ ಶೀತದ ಅಲೆ ಅಲರ್ಟ್: ಎಚ್ಚರಿಕೆಯಿಂದಿರುವಂತೆ ಹವಾಮಾನ ಇಲಾಖೆ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದಿನಿಂದ ಮೂರು ದಿನಗಳ ಕಾಲ ‘ಕೋಲ್ಡ್ ಸ್ಪೆಲ್’  (ಕಡಿಮೆ ತಾಪಮಾನ, ಶೀತದ ಅಲೆ) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಕೆಲವು ದಿನಗಳ ಕಾಲ 3 ಡಿಗ್ರಿಗಿಂತ ಕಡಿಮೆ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಜನವರಿ 5ರಿಂದ 9ರ ನಡುವೆ ದೆಹಲಿಯಲ್ಲಿ ಚಳಿಗಾಳಿ ಕಾಣಿಸಿಕೊಂಡಿದ್ದು ಈಗಾಗಲೇ ಗೊತ್ತೇ ಇದೆ. ಇಷ್ಟು ಕಡಿಮೆ ತಾಪಮಾನ ದಾಖಲಾಗಿರುವುದು ಹತ್ತು ವರ್ಷಗಳಲ್ಲಿ ಇದು ಎರಡನೇ ಬಾರಿ. ವಾಯುವ್ಯ ದಿಕ್ಕಿನಿಂದ ಬೀಸುತ್ತಿರುವ ಗಾಳಿಯಿಂದಾಗಿ ಮತ್ತೊಮ್ಮೆ ತಾಪಮಾನ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮಂಜಿನಿಂದಾಗಿ ಉತ್ತರ ರೈಲ್ವೆ ಪ್ರದೇಶದಲ್ಲಿ 13 ರೈಲುಗಳು ತಡವಾಗಿ ಓಡುತ್ತಿವೆ ಎಂದು ಭಾರತೀಯ ರೈಲ್ವೆ ಸೋಮವಾರ ತಿಳಿಸಿದೆ.
ಜನವರಿ 17, 18 ರವರೆಗೆ ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯ ಹಲವು ಭಾಗಗಳಲ್ಲಿ ತೀವ್ರ ಶೀತ ಅಲೆ ಪರಿಸ್ಥಿತಿಗಳ ಸಾಧ್ಯತೆಯಿದೆ.

ತೀವ್ರ ಚಳಿಯ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶದ ಗೋರಖ್‌ಪುರದ ಜಿಲ್ಲಾಡಳಿತವು ಜನವರಿ 17 ರವರೆಗೆ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ. ಚಂಡೀಗಢದ ಕೇಂದ್ರಾಡಳಿತ ಪ್ರದೇಶವು ಎಂಟನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಚಳಿಗಾಲದ  ರಜೆ ವಿಸ್ತರಿಸಿದೆ.
ಮುಂದಿನ ಐದು ದಿನಗಳ ಕಾಲ ದೇಶದ ವಾಯುವ್ಯ ಭಾಗದಲ್ಲಿ ದಟ್ಟವಾದ ಮಂಜು ಇರಲಿದೆ ಎಂದು ಐಎಂಡಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!