ಹೊಸದಿಗಂತ ಡಿಜಿಟಲ್ ಡೆಸ್ಕ್:
ಶನಿವಾರದಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕ್ಯಾಂಪ್ಬೆಲ್ ಕೊಲ್ಲಿಯಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ತಿಳಿಸಿದೆ.
“ಭಾರತದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕ್ಯಾಂಪ್‌ಬೆಲ್ ಕೊಲ್ಲಿಯ 431 ಕಿಮೀ ಆಗ್ನೇಯ ಭಾಗದಲ್ಲಿ ಇಂದು ಮುಂಜಾನೆ 2.30 ರ ಸುಮಾರಿಗೆ 6.1 ತೀವ್ರತೆಯ ಭೂಕಂಪ ಸಂಭವಿಸಿದೆ” ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಟ್ವೀಟ್ ನಲ್ಲಿ ತಿಳಿಸಿದೆ. ನೆಲದಿಂದ 75 ಕಿಮಿ ಆಳದಲ್ಲಿ ಭೂಕಂಪ ಕೇಂದ್ರ ಪತ್ತೆಯಾಗಿದೆ ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.