ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಸಿಕ್ಕಿಂನ ಲ್ಹೋನಕ್ ಸರೋವರದ ಬಳಿ ಮೇಘಸ್ಫೋಟ ಸಂಭವಿಸಿದ್ದು, ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ.
ಈವರೆಗೂ 19 ಮಂದಿ ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಮುಂದಿನ 24 ಗಂಟೆಗಳಲ್ಲಿ ಇನ್ನೂ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕಾಣೆಯಾದವರಲ್ಲಿ 22 ಸೈನಿಕರು ಇದ್ದು, ಅವರ ಪತ್ತೆಗೆ ಭಾರತೀಯ ಸೇನೆಯ ತ್ರಿಶಕ್ತಿ ಕಾರ್ಪ್ಸ್ ಯೋಧರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸಿಕ್ಕಿಂನಲ್ಲಿ ಪ್ರವಾದ ಕಾರಣ ಅಕ್ಟೋಬರ್ 15 ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸಿಂಗ್ಟಾಮ್ ಬಳಿಯ ಬುರ್ದಾಂಗ್‌ನಲ್ಲಿ ಮಣ್ಣಿನಲ್ಲಿ ವಾಹನಗಳು ಹುಡುಗಿ ಹೋಗಿದ್ದು, ಅವುಗಳನ್ನು ಹೊರತೆಗೆಯಲಾಗುತ್ತಿದೆ.
ತೀಸ್ತಾ ನದಿಯ ತಗ್ಗು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ನಾಪತ್ತೆಯಾದವರ ಕುಟುಂಬಗಳನ್ನು ಸಂಪರ್ಕಿಸಿ ಅಪ್ಡೇಟ್ ನೀಡಲಾಗುತ್ತಿದೆ. ಈವರೆಗೂ ಎರಡು ಸಾವಿರಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.