August 29, 2026
Saturday, August 29, 2026
spot_img

ಬರಗಾಲ ಘೋಷಣೆಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಭಾರಿ ಅನ್ಯಾಯ: ರಾಜ್ಯ ಸರ್ಕಾರದ ವಿರುದ್ದ ಅರವಿಂದ ಬೆಲ್ಲದ ಆರೋಪ

ಹೊಸದಿಗಂತ ವರದಿ ಧಾರವಾಡ:

ರಾಜ್ಯ ಸರ್ಕಾರವು ಬರಗಾಲ ಘೋಷಣೆ ಮಾಡುವ ವಿಚಾರದಲ್ಲಿ ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನ್ಯಾಯ ಎಸಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಗಂಭೀರವಾಗಿ ಆರೋಪಿಸಿದರು.

ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಈ ಬಾರಿ ಮಳೆ ಕೊರತೆಯಿಂದ ಭೀಕರ ಬರದ ಪರಿಸ್ಥಿತಿ ಇದೆ. ಆದರೆ, ಮುಖ್ಯಮಂತ್ರಿ, ಸಚಿವರು ಕೇವಲ ದಕ್ಷಿಣ ಕರ್ನಾಟಕಕ್ಕೆ ಸೀಮಿತ ಎಂಬಂತೆ ಬರ ಪ್ರದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ ಎಂದು ದೂರಿದರು.

​ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳೇ ರಾಜ್ಯ? ಬರಪೀಡಿತ ಪಟ್ಟಿಯಲ್ಲಿ ಧಾರವಾಡ ಜಿಲ್ಲೆಯ ಒಂದೇ ಒಂದು ತಾಲೂಕೂ ಸೇರಿಸಿಲ್ಲ. ಹಾವೇರಿ, ಗದಗ ಮತ್ತು ಬೆಳಗಾವಿ ಜಿಲ್ಲೆಗಳು ಕೈಬಿಟ್ಟಿರುವುದು ಸರ್ಕಾರಕ್ಕೆ ಈ ಭಾಗದ ಬಗ್ಗೆ ಇರುವ ಅಸಡ್ಡೆ ಎತ್ತಿ ತೋರಿಸುತ್ತದೆ ಎಂದರು.

ಇದನ್ನೂ ಓದಿ:

​ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದು, ತಕ್ಷಣವೇ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !