ದೆಹಲಿಯಲ್ಲಿ ತೀವ್ರ ಮಾಲಿನ್ಯ: ವಾಣಿಜ್ಯ ಡೀಸೆಲ್‌ ವಾಹನಗಳ ಪ್ರವೇಶ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿ ಪ್ರದೇಶದ ವಾಯು ಮಾಲಿನ್ಯವು ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಶನಿವಾರದ ಸೂಚ್ಯಂಕವು ಅತ್ಯಂತ ಕೆಳಮಟ್ಟಕ್ಕೆ ಕುಸಿದಿದ್ದು ಈ ಹಿನ್ನೆಲೆಯಲ್ಲಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಡೀಸೆಲ್‌ನಲ್ಲಿ ಚಲಿಸುವ ವಾಣಿಜ್ಯ ವಾಹನಗಳು ಮತ್ತು ಟ್ರಕ್‌ಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಆದಾಗ್ಯೂ, ಅಗತ್ಯ ವಸ್ತುಗಳನ್ನು ಸಾಗಿಸುವ ಎಲ್ಲಾ ವಾಹನಗಳು ಮತ್ತು ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಟ್ರಕ್‌ಗಳಲ್ಲಿ ಚಲಿಸುವ ವಾಹನಗಳಿಗೆ ಅನುಮತಿ ನೀಡಲಾಗಿದೆ.

ನಗರದಲ್ಲಿ ಏರ್ ಕ್ವಾಲಿಟಿ ಇಂಡೆಕ್ಸ್ (AQI) 450 ಅನ್ನು ಮೀರಿರುವುದರಿಂದ ದೆಹಲಿ ಸರ್ಕಾರವು ತಕ್ಷಣವೇ ಜಾರಿಗೆ ಬರುವಂತೆ ಸರಿಪಡಿಸುವ ಕ್ರಮಗಳನ್ನು ಜಾರಿಗೆ ತರಲು ನಿರ್ಧಾರವನ್ನು ತೆಗೆದುಕೊಂಡಿದೆ. ಇದರ ಅಡಿಯಲ್ಲಿ, ರಾಷ್ಟ್ರೀಯ ರಾಜಧಾನಿ ಪ್ರದೇಶ (NCR) ಮತ್ತು ಪಕ್ಕದ ಪ್ರದೇಶಗಳಲ್ಲಿ ಏರ್ ಕ್ವಾಲಿಟಿ ಮ್ಯಾನೇಜ್‌ಮೆಂಟ್ (CAQM) ಆಯೋಗದಿಂದ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) 4 ನೇ ಹಂತವನ್ನು ಜಾರಿಗೊಳಿಸಲಾಗಿದೆ.

ಇದಲ್ಲದೇ ನಗರದೊಳಗೆ ಜನರಿಗೆ ಪ್ರಯಾಣಿಸಲು ಅನುಕೂಲವಾಗಲು 1000 ಖಾಸಗಿ ಸಿಎನ್‌ಜಿ ಕ್ಯಾರೇಜ್‌ ಬಸ್‌ ಗಳನ್ನು ಗುತ್ತಿಗೆಗೆ ಪಡೆಯುವ ಕುರಿತು ಚಿಂತಿಸಲಾಗುತ್ತಿದ್ದು ಪ್ರಯಾಣಿಕರಿಗೆ ಸಂಚರಿಸಲು ಅನುಕೂಲವಾಗಲಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!