ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯ ಅಮೆರಿಕದಲ್ಲಿ ಶನಿವಾರ ಚಂಡಮಾರುತ ಅಪ್ಪಳಿಸಿ 33 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ತೀವ್ರ ಸುಂಟರಗಾಳಿಯಿಂದಾಗಿ ಮನೆಗಳ ಛಾವಣಿಗಳು ಹಾರಿಹೋಗಿವೆ. ದೊಡ್ಡ ಟ್ರಕ್‌ಗಳು ಉರುಳಿಬಿದ್ದಿವೆ. ತೀವ್ರ ಧೂಳಿನ ಬಿರುಗಾಳಿಯಿಂದಾಗಿ ಸುತ್ತಮುತ್ತ ಏನೂ ಕಾಣಿಸುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮರಗಳು ಮತ್ತು ವಿದ್ಯುತ್ ತಂತಿಗಳು ಉರುಳಿಬಿದ್ದಿವೆ. ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ. ಕೆಲವು ಪ್ರದೇಶಗಳು ಬಿರುಗಾಳಿ, ಗುಡುಗು ಸಹಿತ ಮಳೆಯಿಂದಾಗಿ ತೀವ್ರ ಹಾನಿಗೊಳಗಾಗಿವೆ ಎಂದು ತಿಳಿಸಿದ್ದಾರೆ.