ಹೈ ಸ್ಕೂಲ್ ಮಕ್ಕಳಿಗೆ ಇನ್ಮುಂದೆ ಲೈಂಗಿಕ ಶಿಕ್ಷಣ ತರಗತಿ: ಮಹತ್ವದ ನಿರ್ಧಾರ ಕೈಗೊಂಡ್ರು ಶಿಕ್ಷಣ ಸಚಿವರು

ಹೊಸದಿಗಂತ ಡಿಜಿಟಲ್ ಡೆಸ್ಕ್:

2025-26ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ಅವಧಿಯಲ್ಲಿ ನೈತಿಕ ಮೌಲ್ಯದ ಬೋಧನೆ ಮತ್ತು ಲೈಂಗಿಕ ಶಿಕ್ಷಣ ಕಡ್ಡಾಯಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಆದರ್ಶ ವ್ಯಕ್ತಿಗಳು, ಮಹಾನ್‌ ನಾಯಕರ ಜೀವನ ಚರಿತ್ರೆ, ಸಾಧನೆಗಳನ್ನು ಮಕ್ಕಳಿಗೆ 1ರಿಂದ 10ನೇ ತರಗತಿ ವ್ಯಾಸಂಗದ ಅವಧಿಯಲ್ಲಿ ಬೋಧಿಸುವುದು, ಅದೇ ರೀತಿ ರಾಷ್ಟ್ರಪ್ರೇಮ, ದೇಶದ ಭವ್ಯ ಪರಂಪರೆ, ಕಲೆ, ಸಂಸ್ಕೃತಿ , ಸಾಹಿತ್ಯ ಮತ್ತು ಐತಿಹಾಸಿಕ ಸ್ಥಳಗಳನ್ನು ಈ ಅವಧಿಯಲ್ಲಿ ಪರಿಚಯಿಸುವ ಕೆಲಸ ಆಗಬೇಕು. ಅದನ್ನು ನೈತಿಕ ಮೌಲ್ಯದ ಶಿಕ್ಷಣ ಬೋಧನೆ ಅವಧಿಯಲ್ಲಿ ಮಾಡಲಾಗುವುದು ಎಂದು ಹೇಳಿದರು.

ಲೈಂಗಿಕ ಶಿಕ್ಷಣ ಎಂದರೆ ತಪ್ಪಾಗಿ ಭಾವಿಸುವಂತಿಲ್ಲ. ಮಕ್ಕಳ ವಯಸ್ಸಿಗೆ ಅನುಗುಣವಾಗಿ ದೇಹದಲ್ಲಿ ಬಿಡುಗಡೆಯಾಗುವ ಹಾರ್ಮೋನುಗಳು, ಸಹಜವಾಗಿ ಆಗುವ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಗಳು, ಅವುಗಳೆಲ್ಲವನ್ನೂ ಸಹಜ ರೀತಿಯಲ್ಲಿ ಸ್ವೀಕರಿಸುವ ಮತ್ತು ಸೂಕ್ತ ರೀತಿಯಲ್ಲಿ ಎದುರಿಸುವ/ನಿರ್ವಹಿಸುವ ಮನೋಭಾವ ಬೆಳೆಸುವ ಕೆಲಸ ಈ ಲೈಂಗಿಕ ಶಿಕ್ಷಣದ ಮೂಲಕ ಆಗಲಿದೆ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!