ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಶೇಷ ತನಿಖಾ ತಂಡ ತನ್ನ ತನಿಖೆಯನ್ನು ಆರಂಭಿಸಿದೆ.
ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ ಬೆನ್ನಲ್ಲೇ ಪ್ರಕರಣ ಭುಗಿಲೆದ್ದಿದೆ. ಅಲ್ಲದೆ ಲೈಂಗಿಕ ದೌರ್ಜನ್ಯದ ಅಶ್ಲೀಲ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಪ್ರಕರಣ ಸಂಬಂಧ ಎಡಿಜಿಪಿ-ಸಿಐಡಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಹೆಚ್ಚುವರಿ ಕಮಿಷನರ್ ಸುಮನ್ ಡಿ ಪೆನ್ನೇಕರ್ ಮತ್ತು ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಅವರನ್ನೊಳಗೊಂಡ ಎಸ್ಐಟಿ ತಂಡ ತನಿಖೆಯನ್ನು ಆರಂಭಿಸಿದೆ.
ಮನೆಯಲ್ಲಿ ಒಬ್ಬಳೇ ಇದ್ದಾಗ ಪ್ರಜ್ವಲ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಇತ್ತ ಪ್ರಜ್ವಲ್ ರೇವಣ್ಣ ಇದು ಚುನಾವಣಾ ಸಂದರ್ಭವಾದ್ದರಿಂದ ನನ್ನ ವಿರುದ್ಧ ನಡೆಯುತ್ತಿರುವ ಪಿತೂರಿಯಾಗಿದೆ ಎಂದು ಹೇಳಿ ಎಲ್ಲ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.