ಸೆಕ್ಸ್ ವಿಡಿಯೋ ಹಗರಣ: ಪ್ರಜ್ವಲ್‌, ಎಚ್‌ಡಿ ರೇವಣ್ಣಗೆ ಎಸ್‌ಐಟಿ ನೊಟೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸೆಕ್ಸ್ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ಶಾಸಕ ಎಚ್‌ಡಿ ರೇವಣ್ಣ ಅವರಿಗೆ ಎಸ್‌ಐಟಿ ನೊಟೀಸ್ ಜಾರಿ ಮಾಡಿದೆ. 24 ಗಂಟೆಗಳಲ್ಲಿ ಹಾಜರಾಗಲು ಸೂಚನೆ ನೀಡಿದೆ .

ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಾದ ತಾವುಗಳು ಖುದ್ದು ಹಾಜರಾಗಿ ಹೇಳಿಕೆ ನೀಡಬೇಕಿದೆ. ಹೀಗಾಗಿ, ನೊಟೀಸ್ ​ ತಲುಪಿದ 24 ಗಂಟೆಯ ಒಳಗೆ ಕಡ್ಡಾಯವಾಗಿ ಎಸ್‌ಐಟಿ ಮುಂದೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.

ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ನೋಟಿಸ್‌ನಲ್ಲಿಯೇ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಹೆಣ್ಣು ಮುಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ಲೈಂಗಿಕ ಆರೋಪ ಎದುರಿಸುತ್ತಿದ್ದಾರೆ. ಅಶ್ಲೀಲ ವಿಡಿಯೋಗಳು ಇರುವ ಪೆನ್‌ಡ್ರೈವ್ ಹೊರ ಬರುತ್ತಿದ್ದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT)ಕ್ಕೆ ಪ್ರಕರಣದ ತನಿಖೆ ಹಸ್ತಾಂತರಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!