ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅತ್ಯಾಚಾರ ಆರೋಪ ಎದುರಿಸುತ್ತಿರುವ ವಕೀಲ ದೇವರಾಜೇಗೌಡ ಅವರು ಪ್ರಿನ್ಸಿಪಲ್‌ ಸಿ.ಜೆ‌. ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಸಿದ್ದರಾಮ್.ಎಸ್ 14 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪೆಂಡ್ರೈವ್ ಪ್ರಕರಣದಲ್ಲಿ ಇನ್ನೋವಾ ಕಾರಿನಲ್ಲಿ ಬ್ಯಾಗ್ ಸಮೇತ ದೇವರಾಜೇಗೌಡ ಪರಾರಿಯಾಗಲು ಯತ್ನಿಸಿದ್ದರು.

ಆದರೆ ಶುಕ್ರವಾರ ರಾತ್ರಿ ಹೊಳೆನರಸೀಪುರ ಪೊಲೀಸರ ಮಾಹಿತಿ ಮೇರೆಗೆ ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!