ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ ಆಟಗಾರ ಯಶ್ ದಯಾಳ್ ಗೆ ರಿಲೀಫ್ ಸಿಕ್ಕಿದ್ದು, ಎಫ್ ಐಆರ್ ಗೆ ಸಂಬಂಧಿಸಿದಂತೆ ಮಂಗಳವಾರ ಅಲಹಾಬಾದ್ ಹೈಕೋರ್ಟ್ ಅವರ ಬಂಧನಕ್ಕೆ ತಡೆ ನೀಡಿದೆ.
ಮುಂದಿನ ವಿಚಾರಣೆಯವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಆಡುವ ದಯಾಳ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಾಲಯ ನಿರ್ದೇಶಿಸಿದೆ ಎಂದು ಅವರ ಪರ ವಕೀಲ ಗೌರವ್ ತ್ರಿಪಾಠಿ ತಿಳಿಸಿದ್ದಾರೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಶ್ನಿಸಿ ದಯಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ವರ್ಮಾ ಮತ್ತು ಅನಿಲ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
27 ವರ್ಷದ ಯಶ್ ದಯಾಳ್ ವಿರುದ್ಧ ಜುಲೈ 6 ರಂದು ಗಾಜಿಯಾಬಾದ್ ಜಿಲ್ಲೆಯ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 69 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.