ಲೈಂಗಿಕ ದೌರ್ಜನ್ಯ ಪ್ರಕರಣ, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದಿಂದ ಹೊರಬಂದ ವಿಜಯ್‌ ಬಾಬು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ನಟ-ನಿರ್ಮಾಪಕ ವಿಜಯ್ ಬಾಬು ಅವರು ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಕಾರ್ಯಕಾರಿ ಸಮಿತಿಯಿಂದ ಕೆಳಗಿಳಿದ್ದಾರೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರಪರಾಧಿ ಎಂದು ಸಾಬೀತಾಗುವವರೆಗೂ ಸಂಸ್ಥೆಯ ಕಾರ್ಯಕಾರಿ ಸಮಿತಿಯಿಂದ ದೂರ ಉಳಿಯಲಿದ್ದಾರೆ.

ತನ್ನ ವಿರುದ್ಧ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಂಸ್ಥೆಗೆ ಕಳಂಕ ತರಲು ಬಯಸುವುದಿಲ್ಲ ಎಂದು ಸಮಿತಿಗೆ ವಿಜಯ್ ಬಾಬು ಪತ್ರ ಬರೆದಿದ್ದಾರೆ. ಸದ್ಯಕ್ಕೆ ನಾನು ನಿರಪರಾಧಿ ಎಂದು ಸಾಬೀತಾಗುವವರೆಗೂ ಕಾರ್ಯಕಾರಿ ಸಮಿತಿಯಿಂದ ದೂರ ಉಳಿಯುವುದಾಗಿ ತಿಳಿಸಿದ್ದಾರೆ. ಅವರ ಪತ್ರವನ್ನು ಸಮಿತಿ ಅನುಮೋದಿಸಿರುವುದಾಗಿ ಪ್ರಧಾನ ಕಾರ್ಯದರ್ಶಿ ಎಡವೇಲ ಬಾಬು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಬಾಬು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಲು ಕೇರಳ ಹೈಕೋರ್ಟ್ ನಿರಾಕರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!