ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ ಪ್ರಕರಣದ ಆರೋಪಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಬಿ ರಿಪೋರ್ಟ್ ಅನ್ನು ಕೋರ್ಟ್ ತಿರಸ್ಕರಿಸಿದೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಎಸ್ಐಟಿ ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಆದೇಶ ಹೊರಡಿಸಿದೆ. ಅಲ್ಲದೇ ತನಿಖೆ ಮುಂದುವರಿಸಿ ಡಿಸೆಂಬರ್ 29ರೊಳಗೆ ತನಿಖಾ ವರದಿ ಸಲ್ಲಿಸಲು ಎಸ್ಐಟಿ ಪೊಲೀಸರಿಗೆ ಸೂಚಿಸಿದೆ.
ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಡಾ.ಸೂರಜ್ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಸೂರಜ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿತ್ತು. ಈ ಹಿನ್ನೆಲೆ ಸೂರಜ್ ಒಂದು ತಿಂಗಳ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.
ಈಗಾಗಲೇ ಎಚ್‌ಡಿ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಪುತ್ರ ಸೂರಜ್ ಸಹ ಜಾಮೀನು ಸಿಕ್ಕಿದೆ. ಇನ್ನು ರೇವಣ್ಣನವರ ಮತ್ತೋರ್ವ ಪುತ್ರ ಪ್ರಜ್ವಲ್ ರೇವಣ್ಣ ಜೀವಿತಾವಧಿ ಶಿಕ್ಷಗೆ ಗುರಿಯಾಗಿದ್ದು, ಇನ್ನೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

