ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪೋಕ್ಸೊ ಕೇಸ್ ತನಿಖೆ ಎದುರಿಸಲು ಇಂದು ಸಿಐಡಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಬರೋಬ್ಬರಿ ಮೂರು ತಿಂಗಳ ಬಳಿಕ ವಿಚಾರಣೆ ಎದುರಿಸಲು ಬಿಎಸ್ ಯಡಿಯೂರಪ್ಪ ಸಿಐಡಿ ಕಚೇರಿಗೆ ತನಿಖೆಗೆ ಹಾಜರಾಗುತ್ತಿದ್ದಾರೆ.
ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್ಐಆರ್ ದಾಖಲಾಗಿತ್ತು. ಪ್ರಕರಣದ ಹೆಚ್ಚಿನ ತನಿಖೆಗೆ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಮಾಡಿತ್ತು. ಇದಾದ ಬಳಿಕ ಸಿಐಡಿ ಬಿಎಸ್ವೈ ಅವರನ್ನು ಕರೆದು ವಾಯ್ಸ್ ಸ್ಯಾಂಪಲ್ ಪಡೆದು ತನಿಖಾಧಿಕಾರಿಗಳು ಅವರನ್ನು ಕಳುಹಿಸಿಕೊಟ್ಟಿದ್ದಾರೆ.