ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ, ಅಮಾನತುಗೊಂಡ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರನ್ನು ಕಾಂಗ್ರೆಸ್ ಗುರುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಿದೆ.
ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ ಮಾತನಾಡಿ, ಪಕ್ಷವು ಆರೋಪಗಳನ್ನು ಪರಿಶೀಲಿಸಿದ್ದು, ರಾಹುಲ್ ಮಮ್‌ಕೂಟತಿಲ್ ಅವರು ಇನ್ನು ಮುಂದೆ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂದು ನಿರ್ಧರಿಸಿದೆ. ಶಾಸಕರು ಈಗಾಗಲೇ ಅಮಾನತುಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಮ್‌ಕೂಟತಿಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ವಜಾಗೊಳಿಸಿದ ಸ್ವಲ್ಪ ಸಮಯದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

