ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್. ಡಿ ರೇವಣ್ಣ (H.D Revanna) ಅವರ ಮಧ್ಯಂತರ ಜಾಮೀನು ಸೋಮವಾರದವರೆಗೆ ಮುಂದುವರಿಕೆಯಾಗಿದೆ.
ಈಗಾಗಲೇ ಮಧ್ಯಂತರ ಜಾಮೀನು ಮಂಜೂರು ಆಗಿದೆ. ಈ ನಡುವೆ ಇಂದು ಮುಖ್ಯ ಜಾಮೀನು ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯಿತು. ವಾದ – ಪ್ರತಿವಾದ ಆಲಿಸಿದ ನ್ಯಾಯಾಧೀಶರು ಮೇ 20 ಸೋಮವಾರಕ್ಕೆ ಆದೇಶ ಕಾಯ್ದಿರಿಸಿದರು.
ಈ ಹಿನ್ನೆಲೆಯಲ್ಲಿ ಎಚ್.ಡಿ. ರೇವಣ್ಣ ಅವರಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆಯಾದರೂ ಜೈಲಾ? ಬೇಲಾ? ಎಂಬುದು ಸೋಮವಾರ ಪ್ರಕಟವಾಗುವ ತೀರ್ಪಿನ ಮೇಲೆ ನಿಂತಿದೆ.
42ನೇ ಎಸಿಎಂಎಂ ಕೋರ್ಟ್‌ನಲ್ಲಿ ಶುಕ್ರವಾರ ವಿಚಾರಣೆ ಆರಂಭವಾಯಿತು. ಈ ವೇಳೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಬರಿಗಾಲಿನಲ್ಲಿಯೇ ಕೋರ್ಟ್‌ಗೆ ಹಾಜರಾದರು.