ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ ಎಚ್​ಡಿ ರೇವಣ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರು ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಹಾಸನ (Hassan) ಜಿಲ್ಲೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್​ ಡಿ.ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್​​ಗೆ (Bengaluru Session Court) ಅರ್ಜಿ ಸಲ್ಲಿಸಿದ್ದಾರೆ.

ಎಸ್​ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್​ಗೆ ನೋಟಿಸ್ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಹಿಳೆಯೊಬ್ಬರು ದೂರು ದಾಖಲಿಸಿದ್ದು, ಈ ದೂರಿನ ಅನ್ವಯ ಪ್ರಜ್ವಲ್ ರೇವಣ್ಣ ಮತ್ತು ತಂದೆ ಎಚ್​ಡಿ ರೇವಣ್ಣ ಅವರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಇನ್ನು ಈ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಎ1 ಆರೋಪಿಯಾಗಿದ್ದರೆ, ಪುತ್ರ ಎ2 ಆರೋಪಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!