Sunday, October 2, 2022

Latest Posts

ಲೈಂಗಿಕ ದೌರ್ಜನ್ಯ ಪ್ರಕರಣ: ವಾರ್ಡನ್ ರಶ್ಮಿಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ವಾರ್ಡನ್ ರಶ್ಮಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಚಿತ್ರದುರ್ಗ ಕೋರ್ಟ್ ಆದೇಶ ನೀಡಿದೆ.
ಪೋಕ್ಸೋ ಪ್ರಕರಣದ ಎರಡನೇ ಆರೋಪಿ ರಶ್ಮಿಯ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಚಿತ್ರದುರ್ಗ ಜಿಲ್ಲಾ ಎರಡನೇ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ರಶ್ಮಿಯನ್ನು ಸೆ.14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಇದೇ ವೇಳೆ ಇನ್ನಿಬ್ಬರು ಆರೋಪಿಗಳಾದ ಬಸವಾದಿತ್ಯ ಹಾಗೂ ಗಂಗಾಧರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!