ಹೊಸ ದಿಗಂತ ಡಿಜಿಟಲ್ ಡೆಸ್ಕ್
ಲೈಂಗಿಕ ದೌರ್ಜನ್ಯ ಪ್ರಕರಣದ ಎರಡನೇ ಆರೋಪಿ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಅವರಿಗೆ ಸೆ.8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿವಮೊಗ್ಗ ಜೈಲಿನಲ್ಲಿದ್ದ ಮಹಿಳಾ ವಾರ್ಡನ್ ನನ್ನು ಚಿತ್ರದುರ್ಗ ಪೊಲೀಸರು ಏಳು ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಆದ್ರೆ, ಕೋರ್ಟ್ ಎರಡು ದಿನ ಮಾತ್ರ ಪೊಲಿಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಮಹಿಳಾ ವಾರ್ಡನ್ ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆ ನಡೆಸಲಿದ್ದಾರೆ.
ಇನ್ನು ಮುರಾಘಾ ಮಠದ ಶಿವಮೂರ್ತಿ ಮುರುಘಾ ಶರಣ ವಿರುದ್ಧ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣದ 5ನೇ ಆರೋಪಿಗೆ ಪೊಲೀಸರಿಗೆ ಶರಣಾಗಿದ್ದಾರೆ.
ಈ ಪ್ರಕರಣದ 5ನೇ (A5) ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ (ಸೆ, 6) ಪೊಲೀಸರಿಗೆ ಶರಣಾಗಿದ್ದಾರೆ.