Thursday, September 29, 2022

Latest Posts

ಲೈಂಗಿಕ ದೌರ್ಜನ್ಯ ಪ್ರಕರಣ: ಸೆ.8ರವರೆಗೆ ಲೇಡಿ ವಾರ್ಡನ್ ಪೊಲೀಸ್ ಕಸ್ಟಡಿಗೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್ 

ಲೈಂಗಿಕ ದೌರ್ಜನ್ಯ ಪ್ರಕರಣದ ಎರಡನೇ ಆರೋಪಿ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಅವರಿಗೆ ​ ಸೆ.8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿವಮೊಗ್ಗ ಜೈಲಿನಲ್ಲಿದ್ದ ಮಹಿಳಾ ವಾರ್ಡನ್​ ನನ್ನು ಚಿತ್ರದುರ್ಗ ಪೊಲೀಸರು ​ಏಳು ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಆದ್ರೆ, ಕೋರ್ಟ್ ಎರಡು ದಿನ ಮಾತ್ರ ಪೊಲಿಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಮಹಿಳಾ ವಾರ್ಡನ್​ ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆ ನಡೆಸಲಿದ್ದಾರೆ.
ಇನ್ನು ಮುರಾಘಾ ಮಠದ ಶಿವಮೂರ್ತಿ ಮುರುಘಾ ಶರಣ ವಿರುದ್ಧ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣದ 5ನೇ ಆರೋಪಿಗೆ ಪೊಲೀಸರಿಗೆ ಶರಣಾಗಿದ್ದಾರೆ.
ಈ ಪ್ರಕರಣದ 5ನೇ (A5) ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ (ಸೆ, 6) ಪೊಲೀಸರಿಗೆ ಶರಣಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!