ಲೈಂಗಿಕ ದೌರ್ಜನ್ಯ ಕೇಸ್: ಮಲಯಾಳಂ ನಟ ಮುಖೇಶ್ ಬಂಧನ, ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಮತ್ತು ಶಾಸಕ ಎಂ.ಮುಖೇಶ್ ಅವರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ.

ಮಂಗಳವಾರ ಬೆಳಗ್ಗೆ 9.45ಕ್ಕೆ ಕರಾವಳಿ ಪೊಲೀಸ್ ಪ್ರಧಾನ ಕಚೇರಿಗೆ ಆಗಮಿಸಿದ ಮುಕೇಶ್, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾಗಿದ್ದರು.ಎಐಜಿ ಪೂಂಗಾಝಾಲಿ ನೇತೃತ್ವದಲ್ಲಿ ನಡೆದ ವಿಚಾರಣೆಯ ನಂತರ ಮುಕೇಶ್ ಬಂಧನವಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ. ಬಂಧಿಸಿ ನಂತರ ಬಿಡುಗಡೆ ಮಾಡುವ ಮಾಹಿತಿಯೂ ಇದೆ. ಒಟ್ಟಿನಲ್ಲಿ ಮುಕೇಶ್ ಬಂಧನ ಇತರರಲ್ಲಿ ಆತಂಕ ಸೃಷ್ಟಿ ಮಾಡಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!