ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ವಿಶೇಷ ತನಿಖಾ ದಳ ಪುರುಷತ್ವ ಪರೀಕ್ಷೆಗೊಳಪಡಿಸಿದೆ.
ಬೌರಿಂಗ್ ಆಸ್ಪತ್ರೆ ಆವರಣದಲ್ಲಿರುವ ಅಟಲ್ ಬಿಹಾರಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್‌ಗೆ ವೈದ್ಯರ ತಂಡದಿಂದ ವೈದ್ಯಕೀಯ ಪರೀಕ್ಷೆ ನಡೆದಿದೆ. ಈ ಪರೀಕ್ಷಾ ವರದಿ ಇನ್ನೊಂದು ವಾರದಲ್ಲಿ ಎಸ್ಐಟಿಗೆ ಸಲ್ಲಿಕೆಯಾಗಬಹುದು.
ಈ ಸಂಬಂಧ ಪ್ರಜ್ವಲ್ ಅವರಿಂದ ವೀರ್ಯ, ರಕ್ತ ಮಾದರಿ ಸಂಗ್ರಹಿಸಲಾಗಿದೆ. ಇಲ್ಲದೆ ಲೈಂಗಿಕ ಕ್ರಿಯೆ ನಡೆಸಲು ಸಾಮರ್ಥ್ಯ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಇತರೆ ವೈದ್ಯಕೀಯ ಪರೀಕ್ಷೆ ಕೂಡ ನಡೆದಿದೆ ಎಂದು ಹೇಳಲಾಗುತ್ತಿದೆ.
ಪುರುಷತ್ವ ಪರೀಕ್ಷೆ ಸಂಬಂಧ ನ್ಯಾಯಾಲಯದ ಅನುಮತಿ ಪಡೆದ ಎಸ್ಐಟಿ ಅಧಿಕಾರಿಗಳು, ಬುಧವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೌರಿಂಗ್ ಆಸ್ಪತ್ರೆಗೆ ಪ್ರಜ್ವಲ್ ಅವರನ್ನು ಭದ್ರತೆಯಲ್ಲಿ ಕರೆದೊಯ್ದರು. ವೈದ್ಯಕೀಯ ತಪಾಸಣೆ ಮುಗಿದ ಬಳಿಕ ಅವರನ್ನು ಮತ್ತೆ ಸಿಐಡಿ ಕಚೇರಿಗೆ ಕರೆತಂದು ಎಸ್ಐಟಿ ವಿಚಾರಣೆಗೊಳಪಡಿಸಿದೆ.