ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ಮತ್ತೆ ಎಸ್‌ಐಟಿ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣನನ್ನು ಮತ್ತೆ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.

ಕೆ.ಅರ್.ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ಜೂನ್ 24ರವರೆಗೆ ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ.

ಪ್ರಕರಣದಲ್ಲಿ ಸ್ಥಳ ಮಹಜರು, ಹೇಳಿಕೆ ದಾಖಲು, ವಾಯ್ಸ್ ಸ್ಯಾಂಪಲ್, ವೈದ್ಯಕೀಯ ಪರೀಕ್ಷೆ ಸಲುವಾಗಿ ಕಸ್ಟಡಿಗೆ ನೀಡಲಾಗಿದೆ. ನಿನ್ನೆಯಷ್ಟೇ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್‌ ಆದೇಶಿಸಿತ್ತು. ಆದರೆ, 3ನೇ ಕೇಸ್‌ನಲ್ಲಿ ವಿಚಾರಣೆ ನಡೆಸಲು ತನಿಖಾಧಿಕಾರಿಗಳು ಬಾಡಿ ವಾರಂಟ್ ಮೇಲೆ ಮತ್ತೆ ಎಸ್‌ಐಟಿ ಕಸ್ಟಡಿಗೆ ಪಡೆದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!