ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಲ್ಕು‌ ದಿನಗಳ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್‌ಗೆ ಶನಿವಾರ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಜುಲೈ 8 ರವರೆಗೆ ಪ್ರಜ್ವಲ್‌ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶ ನೀಡಿದ್ದಾರೆ.

ಈ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್ ಪರ ವಕೀಲರ ಮನವಿ ಮಾಡಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಿಸಲು ಅವಕಾಶ ನೀಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!