ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇಂದು ಎಸ್ಐಟಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ತನಿಖೆ ನಡೆಸಿದ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ಬಂಧನಕ್ಕೆ ಆದೇಶಿಸಿದೆ.
ಇದೇ ವೇಳೆ ಎಸ್ಐಟಿ ಅಧಿಕಾರಿಗಳು ನನ್ನ ಬಗ್ಗೆ ಕಾಳಜಿ ವಹಿಸದೇ ನನ್ನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕೋರ್ಟ್ಗೆ ತಿಳಿಸಿದರು. ಆಗ ನ್ಯಾಯಾಧೀಶರು ವೈದ್ಯಕೀಯ ಪರೀಕ್ಷೆಯನ್ನು ಏಕೆ ನಡೆಸಲಿಲ್ಲ ಎಂದು ಕೇಳಿದರು, ಅದಕ್ಕೆ ಎಸ್ಐಟಿ ಅಧಿಕಾರಿಗಳು ಪ್ರತಿಕ್ರಿಯಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.