ಲೈಂಗಿಕ ದೌರ್ಜನ್ಯ ಕೇಸ್‌: ರೇವಣ್ಣಗೆ ಮಧ್ಯಂತರ ಜಾಮೀನು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆಸಂಬಂಧಿಸಿದಂತೆ ಶಾಸಕ ಎಚ್​ಡಿ ರೇವಣ್ಣ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ.

ಮಧ್ಯಂತರ ಜಾಮೀನು ನೀಡಿ ​ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ರೇವಣ್ಣ, ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಾದ ಪ್ರತಿವಾದ ಆಲಿಸಿದ ಕೋರ್ಟ್​, ಅಂತಿಮವಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲೂ ಮೊದಲನೇ ಆರೋಪಿ ಆಗಿರುವ ರೇವಣ್ಣ, ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ಗೆ ಹಾಜಾರಾಗಿದ್ದರು. ನ್ಯಾಯಾಧೀಶರ ಮುಂದೆಯೇ ಹಾಜರಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!