October 15, 2026
Thursday, October 15, 2026
spot_img

ಲೈಂಗಿಕ ದೌರ್ಜನ್ಯ ಪ್ರಕರಣ: ತೇಜ್‌ಪಾಲ್‌ಗೆ 5 ಲಕ್ಷ ರೂ. ದಂಡ, 10 ವರುಷ ಕಠಿಣ ಜೈಲು ಶಿಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ, ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅವರಿಗೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು 10 ವರುಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ವಿಚಾರಣಾ ನ್ಯಾಯಾಲಯವು ನೀಡಿದ್ದ ಖುಲಾಸೆ ತೀರ್ಪನ್ನು ವಜಾಗೊಳಿಸಿದ ನ್ಯಾಯಮೂರ್ತಿಗಳಾದ ಡಾ. ನೀಲಾ ಗೋಖಲೆ ಹಾಗೂ ಅಮಿತ್ ಜಮಸಂಡೇಕರ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಎತ್ತಿಹಿಡಿದು ಈ ತೀರ್ಪನ್ನು ಪ್ರಕಟಿಸಿದೆ.

ದಂಡ ಹಾಗೂ ಶಿಕ್ಷೆಯ ವಿವರಣೆ

ಬೆಳಗಿನ ಕಲಾಪದಲ್ಲಿ ತೇಜ್‌ಪಾಲ್ ಅವರನ್ನು ದೋಷಿ ಎಂದು ಘೋಷಿಸಿದ್ದ ನ್ಯಾಯಪೀಠವು, ಮಧ್ಯಾಹ್ನ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತು. 10 ವರುಷಗಳ ಕಠಿಣ ಕಾರಾಗೃಹ ಶಿಕ್ಷೆಯ ಜೊತೆಗೆ 5 ಲಕ್ಷ ರೂ. ದಂಡ ವಿಧಿಸಲಾಗಿದ್ದು, 2 ವಾರಗಳ ಒಳಗೆ ಪೊಲೀಸರಿಗೆ ಶರಣಾಗುವಂತೆ ಸೂಚಿಸಲಾಗಿದೆ.

ವಿಧಿಸಲಾದ ಪ್ರಮುಖ ಕಾಯ್ದೆಗಳು

ತರುಣ್ ತೇಜ್‌ಪಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(f) ಮತ್ತು 376(2)(k) (ಅತ್ಯಾಚಾರ) ಹಾಗೂ ಸೆಕ್ಷನ್ 354A ಮತ್ತು 354B (ಲೈಂಗಿಕ ಕಿರುಕುಳ) ಅಡಿಯಲ್ಲಿ ಆರೋಪಗಳು ಸಾಬೀತಾಗಿವೆ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

Must Read