ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಸಿಐಡಿ ಹೆಗಲಿಗೆ ತನಿಖೆಯ ಹೊಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್‌ಐಆರ್ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಯಡಿಯೂರಪ್ಪ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗುವುದು ಎಂದು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ತಿಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ಸಂತ್ರಸ್ತೆಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!