CRIME | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು

ದಿಗಂತ ವರದಿ ರಾಣೇಬೆನ್ನೂರ:

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯೋರ್ವನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿದ ಘಟನೆ ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಬುಧವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ದೌರ್ಜನ್ಯ ಎಸಗಿದ ವ್ಯಕ್ತಿ ಮಲ್ಲಪ್ಪ ದೊಡ್ಡಮನಿ (45)ಯನ್ನು ಗ್ರಾಮಸ್ಥರು ಹಾಗೂ ಮಹಿಳೆಯರು‌ ಸೇರಿಕೊಂಡು ಹಿಗ್ಗಾ ಮುಗ್ಗಾ ಧರ್ಮದೇಟು ನೀಡಿದ್ದಾರೆ.

ಅಲ್ಲದೆ ಪೋಸ್ಕೋ ಕಾಯ್ದೆ ಅಡಿ ಆರೋಪಿಯನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!