Wednesday, September 27, 2023

Latest Posts

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ

ಹೊಸದಿಗಂತ ವರದಿ,ವಿಜಯಪುರ :

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ನಗರದ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.

ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಗ್ರಾಮದ ಈರಪ್ಪ ನಾಗಪ್ಪ ಮಡಿವಾಳರ ಶಿಕ್ಷೆಗೊಳಗಾದವ. ಅಪ್ರಾಪ್ತೆ ತಮ್ಮ ಮನೆಯ ಎದುರು ಆಟವಾಡುವಾಗ ಪುಸಲಾಯಿಸಿ ಚಾಕಲೇಟ್ ‌ಕೊಡಿಸುವ ನೆಪದಲ್ಲಿ ಪಕ್ಕದ ಜಮೀನಿನಲ್ಲಿ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾನೆ. ಬಳಿಕ ಈ ವಿಷಯ ಮನೆಯಲ್ಲಿ ತಿಳಿದು ತಕ್ಷಣವೇ ದೂರು ದಾಖಲು ಮಾಡಿದ್ದಾರೆ. ಇದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತಾಳಿಕೋಟೆ ಠಾಣೆ ಪೊಲೀಸರು, ತನಿಖೆ ನಡೆಸಿ, ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶ ರಾಮ ನಾಯಕ ಅವರು, ಪ್ರಕರಣದಲ್ಲಿಯ ಸಾಕ್ಷ್ಯಾಧಾರಗಳು ರುಜುವಾತಾಗಿವೆ ಎಂದು ತೀರ್ಮಾನಿಸಿ ತೀರ್ಪು ನೀಡಿದ್ದಾರೆ.

ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವಿ.ಜಿ. ಹಗರಗುಂಡ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!