ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಶಿಕ್ಷೆ

ಹೊಸದಿಗಂತ ವರದಿ, ವಿಜಯಪುರ:

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅತ್ಯಾಚಾರಿಗೆ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯ 10 ವರ್ಷ ಶಿಕ್ಷೆ ಹಾಗೂ 2600 ದಂಡ ವಿಧಿಸಿ ತೀರ್ಪು ನೀಡಿದೆ.

ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದ ಅನಿಲ ಮನ್ನಿಕೇರಿ ಶಿಕ್ಷೆಗೊಳಗಾದ ಆರೋಪಿ.

ಆರೋಪಿಯು ಬಾಲಕಿಯನ್ನು ಶಾಲೆಗೆ ಬಿಟ್ಟು ಬರುವುದು ಮತ್ತು ಮನೆಗೆ ಕರೆದುಕೊಂಡು ಹೋಗುವುದು ಮಾಡುತ್ತಿದ್ದ. ಇದರಿಂದಾಗಿ ಬಾಲಕಿ ಆತನನ್ನು ನಂಬಿದ್ದಳು. ಆದರೆ 2018 ಜೂ.11 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಬಲೇಶ್ವರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡು ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ರಾಮ ನಾಯಕ ಅವರು, ಆರೋಪಿಗೆ 10 ವರ್ಷ ಶಿಕ್ಷೆ ಹಾಗೂ 2600 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿ.ಜಿ. ಹಗರಗುಂಡ ವಾದ ಮಂಡಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!