ಹೊಸದಿಗಂತ ವರದಿ ಯಾದಗಿರಿ:
ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿದ ಪೋಲಿಸ್ ಪೇದೆ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿದೆ. ಸೈದಾಪುರ ಪೊಲೀಸ್ ಠಾಣೆ ಪೇದೆ ಬಲರಾಮ್ ಅಂದರ್ ಆದ ಆರೋಪಿ.
16 ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಲೈಂಗಿಕ ಸಂಬಂಧ ಬೆಳೆಸಿದ್ದು, 18 ವರ್ಷ ದಾಟಿದ ನಂತರ ಮದುವೆಯಾಗುತ್ತೇನೆ ಎಂದು ಹೇಳಿ ನಂಬಿಸಿದ್ದ ಎನ್ನಲಾಗಿದೆ. ಗುರುಮಠಕಲ್ ತಾಲೂಕಿನ ಸೈದಾಪುರ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ.
ಎರಡು ವರ್ಷ ಯುವತಿಯೊಂದಿಗೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ್ದಾನೆವೆಂದು ಬಾಲಕಿ ದೂರು ನೀಡಿದ್ದಾಳೆ. ಬಳಿಕ ಆಕೆಗೆ 18 ವರ್ಷ ತುಂಬುತ್ತಿದ್ದಂತೆ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡ ಬಲರಾಮ ಮದುವೆಯಾದ ಬಳಿಕ ಮನೆಗೆ ಕರೆದುಕೊಂಡು ಹೋಗಲು ನಿರಾಕರಿದ್ದಾನೆ. ಯಾದಗಿರಿ ಮಹಿಳಾ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.