ಹೊಸದಿಗಂತ ಡಿಜಿಟಲ್ ಡೆಸ್ಕ್:
2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ.
ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಬಾಲಕಿಯ ಗ್ರಾಮದವನೇ ಆದ ಶಿವನಗೌಡ ಬಂಧಿತ ಆರೋಪಿ. ನಿತ್ಯ ಸ್ಕೂಲ್ ಬಸ್‌ನಲ್ಲಿ ಶಾಲೆಗೆ ವಿದ್ಯಾರ್ಥಿನಿ ಬರುತ್ತಿದ್ದಳು. ಈ ವೇಳೆ ಆರೋಪಿ ಬಂದು ವಿದ್ಯಾರ್ಥಿನಿಯನ್ನ ಹೊರಗಡೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಅಂತ ಆರೋಪಿಸಲಾಗಿದೆ.