Thursday, August 18, 2022

Latest Posts

ಎರಡು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ

ಹೊಸದಿಗಂತ ವರದಿ, ಮಂಗಳೂರು:
ಅಮಾನವೀಯ ಘಟನೆಯೊಂದು ಕಡಲನಗರಿ ಮಂಗಳೂರಿನಲ್ಲಿ ನಡೆದಿದೆ. ಎರಡು ವರ್ಷದ ಹಸುಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಹೊಯ್ಗೆ ಬಜಾರ್ ಬಳಿ ಒಣ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡುತ್ತಿರುವ ಬಿಹಾರ ಮೂಲದ ದಂಪತಿಯ 2 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದ್ದು ಬಳಿಕ ಮಗುವಿನ ಕೊಲೆಗೆ ಯತ್ನಿಸಲಾಗಿದೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ಚಂದನ್ ಎಂದು ಗುರುತಿಸಲಾಗಿದೆ.
ಆರೋಪಿ ಚಂದನ್ ಹಸುಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಬಳಿಕ ಮಗುವನ್ನು ಉಪ್ಪು ತುಂಬಿದ ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಲೆ ಮಾಡುವ ಪ್ರಯತ್ನ ನಡೆಸಿದ್ದಾನೆ. ಸದ್ಯ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!