ಪಾಕ್ ಹೈಕಮಿಷನ್‌ನ ಸಿಬ್ಬಂದಿಯಿಂದ ಲೈಂಗಿಕ ಬೇಡಿಕೆ: ಕಹಿ ಘಟನೆ ಬಿಚ್ಚಿಟ್ಟ ಪಂಜಾಬ್ ಮಹಿಳೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನ ಹಿರಿಯ ಸಿಬ್ಬಂದಿಯ ವಿರುದ್ಧ ಪಂಜಾಬ್‌ನ ಕಾಲೇಜು ಪ್ರಾಧ್ಯಾಪಕಿ ಅಸಭ್ಯ ವರ್ತನೆಯ ಆರೋಪ ಮಾಡಿದ್ದಾರೆ.

ತಾನು 2021ರಲ್ಲಿ ಪಾಕಿಸ್ತಾನಕ್ಕೆ ಪ್ರಯಾಣಿಸಲು ವೀಸಾಕ್ಕಾಗಿ ಅರ್ಜಿ ಸಲ್ಲಿಸಲು ರಾಯಭಾರ ಕಚೇರಿಗೆ ಭೇಟಿ ನೀಡಿದಾಗ ಕೆಲವು ಹಿರಿಯ ಸಿಬ್ಬಂದಿ ತಮ್ಮ ಲೈಂಗಿಕ ಬಯಕೆಯನ್ನು ಈಡೇರಿಸುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ನಾನು ಲಾಹೋರ್‌ಗೆ ಭೇಟಿ ನೀಡಿ ಅಲ್ಲಿನ ಸ್ಮಾರಕಗಳ ಫೋಟೋಗಳನ್ನು ತೆಗೆಯಲು ಬಯಸಿದ್ದೆ. ಹಾಗೇ, ಆ ಸ್ಮಾರಕಗಳ ಬಗ್ಗೆ ಬರೆಯಲು ಉದ್ದೇಶಿಸಿದ್ದೆ. ಅಲ್ಲದೆ, ಉಪನ್ಯಾಸ ನೀಡಲು ನನ್ನನ್ನು ಆಹ್ವಾನಿಸಿದ ವಿಶ್ವವಿದ್ಯಾನಿಲಯಕ್ಕೂ ಭೇಟಿ ನೀಡಲು ಬಯಸಿದ್ದೆ ಎಂದು ಹೇಳಿದ್ದಾರೆ.

ಇದಕ್ಕಾಗಿ ವೀಸಾಗೆ ಅರ್ಜಿ ಸಲ್ಲಿಸಲು ಪಾಕಿಸ್ತಾನದ ರಾಯಭಾರ ಕಚೇರಿಗೆ ಹೋದಾಗ ಅಲ್ಲಿನ ಹಿರಿಯ ಸಿಬ್ಬಂದಿ ನನ್ನ ಬಳಿ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಮುಜುಗರ ಉಂಟು ಮಾಡಿದರು. ನಾನು ಯಾಕೆ ಮದುವೆಯಾಗಿಲ್ಲ ಎಂದು ಅವರು ನನ್ನನ್ನು ಕೇಳಿದರು. ನಾನು ಮದುವೆಯಾಗದೆ ಹೇಗೆ ಬದುಕುತ್ತೇನೆ, ನನ್ನ ಲೈಂಗಿಕ ಬಯಕೆಗಳನ್ನು ತೀರಿಸಿಕೊಳ್ಳಲು ನಾನು ಏನು ಮಾಡುತ್ತೇನೆ ಎಂದು ಅವರು ಪ್ರಶ್ನಿಸಿದ್ದರು. ಅಲ್ಲದೆ, ನನ್ನಲ್ಲಿ ಲೈಂಗಿಕತೆಯ ಬೇಡಿಕೆ ಇಟ್ಟಿದ್ದರು ಎಂದು ಆ ಹೇಳಿಕೊಂಡಿದ್ದಾರೆ.

ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ನೀಡಿರುವ ದೂರಿನಲ್ಲಿ ಆ ಮಹಿಳೆ ಈ ವಿಷಯವನ್ನು ಕೈಗೆತ್ತಿಕೊಳ್ಳುವಂತೆ ಕೋರಿದ್ದಾರೆ. ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಬಿಲಾವಲ್ ಭುಟ್ಟೋ ಅವರಿಗೆ ಪತ್ರ ಬರೆದಿದ್ದರು. ಆದರೆ, ಏನೂ ಪ್ರಯೋಜನವಾಗಲಿಲ್ಲ ಎಂದು ಆಕೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!