ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳದ ಘಟನೆ ನಡೆದಿದೆ.
ನಿನ್ನೆ ಬೆಳಗ್ಗೆ ರಾಜಾಜಿನಗರ ಮೆಟ್ರೋ ಸ್ಟಾಪ್‌ನಲ್ಲಿ ಯುವತಿಗೆ ಲೋಕೇಶ್ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ. ಆಕೆಯ ಮೈಕೈ ಮುಟ್ಟಿದ್ದಾನೆ. ಯುವತಿ ಜೋರಾಗಿ ಕೂಗಿದ್ದಾಳೆ. ಮುಂದಿನ ನಿಲ್ದಾಣದಲ್ಲಿ ಆರೋಪಿ ಲೋಕೇಶ್ ಪರಾರಿಯಾಗಲು ಯತ್ನಿಸಿದ್ದಾನೆ.
ಮೆಟ್ರೋ ಭದ್ರತಾ ಅಧಿಕಾರಿಗಳು ಲೋಕೇಶ್‌ನ್ನು ವಶಕ್ಕೆ ಪಡೆದಿದ್ದಾರೆ. ನಂತರ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಲಾಗಿದೆ.
ಈತ ಈ ಹಿಂದೆಯೂ ಈ ರೀತಿ ಮಾಡಿದ್ದಾನೆ. ಪಿಕ್ ಪಾಕೆಟ್, ಮೊಬೈಲ್ ಕಳ್ಳತನ ಪ್ರಕರಣಗಳು ಈತನ ಮೇಲಿವೆ ಎನ್ನಲಾಗಿದೆ.