ಲೈಂಗಿಕ ಕಿರುಕುಳ ಆರೋಪ: ಹರಿಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹರಿಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕೊಲೆ ಬೆದರಿಕೆ ಕೇಳಿ ಬಂದ ಹಿನ್ನೆಲೆ ತಮ್ಮಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜ್ಯೂನಿಯರ್ ಅಥ್ಲೆಟಿಕ್ಸ್ ಕೋಚ್ ನೀಡಿದ ದೂರಿನ ಆಧಾರದ ಮೇಲೆ ಸಂದೀಪ್ ಸಿಂಗ್ ವಿರುದ್ಧ ಚಂಡೀಗಢ ಪೊಲೀಸರು ದಾಖಲಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ತಮ್ಮ ಹೆಸರನ್ನು ಹಾಳು ಮಾಡುವ ಯತ್ನ ನಡೆಯುತ್ತಿದೆ. ನನ್ನ ವಿರುದ್ಧ ಹೊರಿಸಲಾಗಿರುವ ಸುಳ್ಳು ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಈ ತನಿಖೆಯ ವರದಿ ಬರುವವರೆಗೆ ಕ್ರೀಡಾ ಇಲಾಖೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿಗೆ ಹಸ್ತಾಂತರಿಸುತ್ತೇನೆ ಎಂದು ತಿಳಿಸಿದರು.

ಈ ಮೊದಲುದ ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‍ಎಲ್‍ಡಿ) ಕಚೇರಿಯಲ್ಲಿ ಸಂತ್ರಸ್ತೆ ಪತ್ರಿಕಾಗೋಷ್ಠಿ ನಡೆಸಿ, ಮನೋಹರ್ ಲಾಲ್ ಖಟ್ಟರ್ ಸರ್ಕಾರವು ಸಂದೀಪ್ ಸಿಂಗ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿದ್ದರು.

ಕಳೆದ ವರ್ಷ ಫೆಬ್ರವರಿಯಿಂದ ನವೆಂಬರ್‌ವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ಅಶ್ಲೀಲ ಮೆಸೇಜ್‍ಗಳನ್ನು ಕಳುಹಿಸುವ ಮೂಲಕ ಸಚಿವರು ಕಿರುಕುಳ ನೀಡಿದ್ದಾರೆ. ಅಷ್ಟೇ ಅಲ್ಲದೇ ಅವರು ತನ್ನನ್ನು ಅನುಚಿತವಾಗಿ ಮುಟ್ಟಿದ್ದರು. ನಿರಂತರ ಕಿರುಕುಳದಿಂದಾಗಿ ಸಾಮಾಜಿಕ ಜಾಲತಾಣವನ್ನು ತೊರೆಯಬೇಕಾಯಿತು ಎಂದು ಆರೋಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!